ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Vijayavani-Featured-Image
Published on

ಬೆಂಗಳೂರು: ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ, ಹೊಸ ಅನ್ವೇಷಣೆ ಹಾಗೂ ಸೃಜನಾತ್ಮಕ ಕಾರ್ಯಗಳಿಂದ ವಿಭಿನ್ನ ಸಾಧನೆ ಮಾಡಿರುವ ರೈತ ಮತ್ತು ರೈತ ಮಹಿಳೆಯರಿಂದ 2024-25ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್​ಐಡಿ-ಫ್ರೂಟ್ಸ್ ಐಡೆಂಟಿಫಿಕೇಷನ್ ಸಂಖ್ಯೆ ಬಳಸಿಕೊಂಡು ಸಿಟಿಜನ್ ಲಾಗ್‌ಇನ್ ಅಥವಾ ಆರ್‌ಎಸ್‌ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ (ಆರ್‌ಎಸ್‌ಕೆ) ಅಥವಾ ಸಾರ್ವಜನಿಕ ಸೇವಾ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ, ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು, ಅರ್ಜಿ ಸಲ್ಲಿಸಲು ಪಾಲಿಸಬೇಕಾದ ಮಾನದಂಡ ಮತ್ತಿತರ ಮಾಹಿತಿಗಾಗಿ ಹತ್ತಿರದ ಆರ್‌ಎಸ್‌ಕೆನ ಕೃಷಿ ಅಧಿಕಾರಿ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿಯ ಹೆಚ್ಚುವರಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net