ಲ್ಯಾಪ್‌ಟಾಪ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

download
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ 2024- 25ನೇ ಸಾಲಿಗೆ ಲ್ಯಾಪ್‌ಟಾಪ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಬಿ.ಕಾಂ, ಬಿ.ಎಸ್ಸಿ, ಬಿಬಿಎಂ, ಬಿ.ಇ, ಎಂಬಿಬಿಎಸ್, ಎಂಕಾ0, ಎಂಎ, ಎಂಎಸ್ಸಿ, ಎಂ.ಟೆಕ್, ಎಂಬಿಎ ವಿದ್ಯಾಭ್ಯಾಸ ಮಾಡುತ್ತಿರುವ ಸಫಾಯಿ ಕರ್ಮಚಾರಿಗಳ ಅವಲಂಬಿತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಗುವುದು. ಆಸಕ್ತರು ಫೆ. 28ರೊಳಗೆ ವಿದ್ಯಾಗಿರಿ ಪೊಲೀಸ್ ಠಾಣೆ ಹತ್ತಿರದ ಶಿವಾ ಆರ್ಕೆಡ್ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net