

ಧಾರವಾಡ: ಜಿಲ್ಲೆಯ ಜವಾಹರ ನವೋದಯ ವಿದ್ಯಾಲಯದ 2024- 25ನೇ ಸಾಲಿಗೆ 9 ಮತ್ತು 10ನೇ ತರಗತಿಗೆ ಪ್ರವೇಶ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 8 ಹಾಗೂ 10ನೇ ತರಗತಿಯಲ್ಲಿ ಓದುತ್ತಿರುವ ಜಿಲ್ಲೆಯ ಅರ್ಹ ವಿದ್ಯಾರ್ಥಿಗಳು ವೆಬ್‌ಸೈಟ್ www.navodaya.gov.in ಮೂಲಕ ಅ. 31ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಜವಾಹರ ನವೋದಯ ವಿದ್ಯಾಲಯವನ್ನು ಸಂಪರ್ಕಿಸಲು ಪ್ರಕಟಣೆ ಕೋರಿದೆ.