ನೆಕ್ಸಸ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ ; ಯುಎಸ್ ರಾಯಭಾರ ಕಚೇರಿ ಆಯೋಜನೆ

Published on

ಚೆನ್ನೈ: ನವದೆಹಲಿಯ ಯು.ಎಸ್. ರಾಯಭಾರ ಕಚೇರಿಯು ಅಲ್ಲಿನ ಅಮೇರಿಕನ್ ಸೆಂಟರ್‌ನಲ್ಲಿ ಉದ್ಯಮಿಗಳ ಮಾರ್ಗದರ್ಶನಕ್ಕಾಗಿ ಪ್ರತಿಷ್ಠಿತ ನೆಕ್ಸಸ್ ಕಾರ್ಯಕ್ರಮ ಆಯೋಜಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಒಂಭತ್ತು ವಾರಗಳ ಈ ತರಬೇತಿಯು 2025ರ ಫೆಬ್ರವರಿ 2 ರಿಂದ ಆರಂಭವಾಗಲಿದೆ.

ನೆಕ್ಸಸ್ ಕಾರ್ಯಕ್ರಮದಲ್ಲಿ ಭಾರತದ 15 ನವೋದ್ಯಮಗಳಿಗೆ ಭಾರತೀಯ ಮತ್ತು ಅಮೇರಿಕನ್ ತಜ್ಞರಿಂದ ತರಬೇತಿ ಪಡೆಯುವ ಅವಕಾಶ ದೊರೆಯಲಿದೆ. ಈಗಿನ ಮಾರುಕಟ್ಟೆಯ ಅಗತ್ಯಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಮೇಲ್ದರ್ಜೆಗೇರಿಸಲು, ಮಾರುಕಟ್ಟೆಯ ನಾಡಿಮಿಡಿತ ಅರಿಯಲು ಮತ್ತು ಗುರಿ ನಿಗದಿ ಪಡಿಸಿಕೊಳ್ಳಲು ಈ ತಜ್ಞರು ನೆರವಾಗಲಿದ್ದಾರೆ. ನವೋದ್ಯಮಗಳ ಮೇಲೆ ಕೃತಕ ಬುದ್ಧಿಮತ್ತೆಯ ಪ್ರಭಾವ ಮತ್ತು ಉದ್ಯಮಿಗಳ ಮಾನಸಿಕ ಆರೋಗ್ಯದ ಮಹತ್ವ ಕುರಿತು ಕಾರ್ಯಕ್ರಮದಲ್ಲಿ ಚರ್ಚಿಸಲಾಗುವುದು.

ಈ ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ಉದ್ಯಮಿಗಳು ಜ.5 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಬೇಕಾದ ವಿಳಾಸ : www.startupnexus.in

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net