

ಮಡಿಕೇರಿ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಜೂ.೨೫ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಹಾಸಭಾದ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
೨೦೨೨-೨೩ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕಳಿಸಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳು ಸ್ವ-ವಿವರಗಳೊಂದಿಗೆ ಅರ್ಜಿಯನ್ನು ಮಹಾಸಭೆಯ www.veerashaivamahasabha.in ವೆಬ್‌ಸೈಟ್‌ನಲ್ಲಿ ಜೂ.೨೫ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಬಂದ ಅರ್ಜಿಯನ್ನು ಮಾತ್ರ ಸ್ವೀಕರಿಸಲಾಗುವುದು ಎಂದು ಶಿವಶಂಕರಪ್ಪ ತಿಳಿಸಿದ್ದಾರೆ.