

ವಿಜಯಪುರ : ತಳವಾರ ಸಮಾಜದ ಪ್ರತಿಭಾ ಪುರಸ್ಕಾರ ಸಮಿತಿ ವತಿಯಿಂದ 2024&25ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವೀತಿಯ ಪಿಯುಸಿಯಲ್ಲಿ ಶೇ. 80ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 17 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಅರ್ಜಿ ಸಲ್ಲಿಸಲು ಜು. 31 ಕೊನೆಯ ದಿನವಾಗಿದೆ.
ಅರ್ಹ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ, ಅಂಕಪಟ್ಟಿ, ಆಧಾರ್ ಕಾರ್ಡ್ಗಳ ನಕಲು ಪ್ರತಿ ಹಾಗೂ ಇತ್ತೀಚಿನ ಎರಡು ಫೊಟೋಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಅಂಚೆ ಮೂಲಕ ಅಥವಾ ಖುದ್ದಾಗಿ ನಗರದ ಬಸ್ ನಿಲ್ಧಾಣ ಬಳಿಯ ಲಲಿತ ಮಹಲ್ ಹೊಟೆಲ್ ಆವರಣದಲ್ಲಿರುವ ಾನಗಂಗಾ ವಿವಿದೊದ್ದೇಶ ಸಹಕಾರ ಸಂ, ಗಾಂಧಿ ಚೌಕ್ ಬಳಿಯ ಹಳೆಯ ಪುಸ್ತಕ ಅಂಗಡಿಗೆ ಹಾಗೂ ಮೀನಾ ಚೌಕ ಬಳಿಯ ಮಧುರಾ ಬಟ್ಟೆ ಅಂಗಡಿಯಲ್ಲಿ ಅರ್ಜಿ ಸಲ್ಲಿಸಬೇಕೆಂದು ಸಮೀತಿ ಅಧ್ಯ ಎಸ್.ಎಂ. ಕಣಬೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.