ಮೈಸೂರು: ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳು ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ತಮ್ಮ ಇತ್ತೀಚಿನ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಅಂಕಪಟ್ಟಿ ಜೆರಾಕ್ಸ್ ಪ್ರತಿಯನ್ನು ಆಗಸ್ಟ್ 10ರ ಒಳಗೆ ಕೆ.ಆರ್.ಮೊಹಲ್ಲಾದಲ್ಲಿರುವ ಸಂಘದ ಕಚೇರಿಗೆ ತಲುಪಿಸುವಂತೆ ಕಾರ್ಯದರ್ಶಿ ಹೇಳಿಕೆಯಲ್ಲಿ ಕೋರಿದ್ದಾರೆ.