ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

111111111
Published on

ಧಾರವಾಡ: ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದಿ0ದ ಧಾರವಾಡ ತಾಲೂಕಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳ ವಿಶೇಷ ಸಾಧಕರಿಗೆ ಅ. 19ರಂದು ಬೆಳಗ್ಗೆ 10 ಗಂಟೆಗೆ ನಗರದ ಲಿಂಗಾಯತ ಭವನದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಸ್‌ಎಲ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕ ಗಳಿಸಿ ಬಣಜಿಗ ಸಮಾಜದ ವಿದ್ಯಾರ್ಥಿಗಳು ಅ. 8ರೊಳಗೆ ಅಗತ್ಯ ದಾಖಲೆಗಳೊಂದಿಗೆ ಸಿವಿಲ್ ಹಾಸ್ಪಿಟಲ್ ರಸ್ತೆಯ ಕವಳಿ ಬಿಲ್ಡಿಂಗ್ ಅಥವಾ ಸುಭಾಸ ರಸ್ತೆಯ ಬಿ.ಬಿ. ಕೆಲಗೇರಿ ಆ್ಯಂಡ್ ಸನ್ಸ್ ಅಂಗಡಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net