ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

BHAGIRATHA SWAMIJI uppara matt
Published on

ಹಿರಿಯೂರು: ತಾಲೂಕು ಭಗೀರಥ ನೌಕರರ ಉಪ್ಪಾರ ಹಾಗೂ ಯುವಕ ಸಂಘದ ಸಹಯೋಗದಲ್ಲಿ ಉಪ್ಪಾರ ಸಮುದಾಯದ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಂದಿನ ಕಾರ್ಯಕ್ರಮಕ್ಕೆ ಶ್ರೀ ಪುರುಷೋತ್ತಮ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

2021-22 ಹಾಗೂ 2022-23ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಗಳಿಸಿದವರು ಅರ್ಜಿ ಸಲ್ಲಿಸಬಹುದು. ಈ.ಪ್ರಕಾಶ್, ಉಪನ್ಯಾಸಕ, ಟಿ.ಬಿ.ಸರ್ಕಲ್, ಹಿರಿಯೂರು. ಇಲ್ಲಿಗೆ ಆ.26ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ನೌಕರರ ಸಂಘದ ಅಧ್ಯಕ್ಷ ಬಿ.ಎಂ.ಹನುಮಂತಪ್ಪ, ಕಾರ್ಯದರ್ಶಿ ಎಚ್.ಕೆ.ಗುರುರಾಜ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net