ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Published on

ಮೈಸೂರು: ನಗರದ ಚಾಮುಂಡಿಪುರಂನಲ್ಲಿರುವ ಆರಾಧ್ಯ ಮಹಾಸಭಾ ಉಮಾ ಮಹೇಶ್ವರ ಹಾಗೂ ಪಂಚಾಚಾರ್ಯರ ದೇವಸ್ಥಾನದಿಂದ 2023- 24ನೇ ಸಾಲಿನ ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪುರಸ್ಕಾರ ಕಾರ್ಯಕ್ರಮವನ್ನು ಜು.21ರಂದು ಆಯೋಜಿಸಲು ಉದ್ದೇಶಿಸಲಾಗಿದೆ. ಶೇ. 90 ಕ್ಕಿಂತ ಅಧಿಕ ಅಂಕ ಪಡೆದ ಆರಾಧ್ಯ ಜನಾಂಗದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಮಹಾಸಭಾ ಕಚೇರಿಗೆ ಜು.10 ರ ಒಳಗಾಗಿ ಕೈಬರಹದ ಅರ್ಜಿ, ಅಂಕಪಟ್ಟಿ ಮತ್ತು ಆಧಾರ್ ಕಾರ್ಡ್ ನಕಲು ಪ್ರತಿ, ಭಾವಚಿತ್ರ ಸಹಿತ ಅರ್ಜಿ ಸಲ್ಲಿಸಬೇಕು. ವಿವರಗಳಿಗೆ ವರಲಕ್ಷ್ಮೀ ಕುಮಾರ್ (98449 35900) ಸಂಪರ್ಕಿಸಲು ಮಹಾಸಭಾ ನಿರ್ದೇಶಕ ನಂಜುಂಡ ಆರಾಧ್ಯ ಹೇಳಿಕೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net