

ವಿಜಯಪುರ : ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದಿಂದ ಭೋವಿ (ವಡ್ಡರ) ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಚಿತ್ರದುರ್ಗ ಗುರುಪೀಠದ ಆವರಣದಲ್ಲಿ ಜುಲೈ 18 ರಂದು ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಗುವುದು. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, 2 ಭಾವಚಿತ್ರ ಹಾಗೂ ಬ್ಯಾಂಕ್ ಖಾತೆಯ ದಾಖಲೆಗಳನ್ನು ಜೂ. 31 ರೊಳಗೆ ಚಿತ್ರದುರ್ಗದ ದಾವಣಗೆರೆ ರಸ್ತೆಯಲ್ಲಿರುವ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠ, ಇಮ್ಮಡಿ ಜಯನಗರ ಅವರಿಗೆ ಅಂಚೆ ಮೂಲಕ ಕಳುಹಿಸಬಹುದಾಗಿದೆ. ಮಾಹಿತಿಗಾಗಿ ಮೊಬೈಲ್ 9481308433, 9900882964 ಮತ್ತು 8861589310 ಗೆ ಸಂಪರ್ಕಿಸುವಂತೆ ಭೋವಿ (ವಡ್ಡರ) ಜಿಲ್ಲಾಧ್ಯಕ್ಷ ರಾಮು ಹೊಸಪೇಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.