ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

Application
Published on

ಮೈಸೂರು: ಮೈಸೂರು ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧರು ಮತ್ತು ಪಾರ್ಸಿ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿಸಲು ಅಭ್ಯರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಕಲಿಕಾ ಪೂರಕ ವಾತಾವರಣ ಒದಗಿಸಲು ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತೆ ಬೆಂಗಳೂರು ನಗರದಲ್ಲಿ ನಿರ್ಮಾಣವಾಗಿರುವ ಹಜ್ ಭವನದಲ್ಲಿ 10 ತಿಂಗಳ ವಸತಿ ಸಹಿತ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 25 ಕೊನೆಯ ದಿನಾಂಕವಾಗಿದ್ದು, ಸೇವಾ ಸಿಂಧು ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಪ್ರತಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಗೆ ಸಲ್ಲಿಸುವಂತೆ ತಿಳಿಸಲಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net