

ವಿಜಯವಾಣಿ ಸುದ್ದಿಜಾಲ ಧಾರವಾಡ
ಸಮಾಜ ಕಲ್ಯಾಣ ಇಲಾಖೆಯಿಂದ 2024- 25ನೇ ಸಾಲಿಗಾಗಿ ಮೆಟ್ರಿಕ್ ಪೂರ್ವ 1ರಿಂದ 10ನೇ ತರಗತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು http://ssp.postmatric.karnataka.gov.in/ssppre ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಇಲಾಖೆ ಕಚೇರಿ ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.