

ಮೈಸೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2022-23ನೇ ಸಾಲಿನಲ್ಲಿ ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆಮಾಡಲು ಅರ್ಜಿ ಆಹ್ವಾನಿಸಿದೆ.
ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ ತಂಡದಲ್ಲಿ 8 ಜನ ಕಲಾವಿದರಿರಬೇಕು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದ ಕಲಾವಿದರಾಗಿರಬೇಕು. ಮತ್ತು ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಒಬ್ಬರು ಮಹಿಳೆ ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಠ ಪಂಗಡಕ್ಕೆ ಸೇರಿದವರಾಗಿರಬೇಕು. ಮೈಸೂರು ಜಿಲ್ಲೆಯ ಕಲಾವಿದರು ಮಾತ್ರ ಕಲಾ ತಂಡದಲ್ಲಿರಬೇಕು. ಕಲಾವಿದರು ತಮ್ಮ ಆಧಾರ್ ಕಾರ್ಡ್ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ಮೈಸೂರು ಜಿಲ್ಲೆಯ ಆಸಕ್ತ ಕಲಾತಂಡಗಳು 2022ರ ಅಕ್ಟೋಬರ್ 15 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಉಪ ನಿರ್ದೇಶಕರು, ಮೈಸೂರು ಜಿಲ್ಲಾ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಧನ್ವಂತರಿ ರಸ್ತೆ, ಮೈಸೂರು-570001 ಇಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ: 9480841229 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.