ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

sericulture
Published on

ಬೆಂಗಳೂರು: ರೇಷ್ಮೆ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಗೆ ಒಳಪಡುವ ರೇಷ್ಮೆ ಬೆಳೆಗಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕನಿಷ್ಠ ಒಂದು ಎಕರೆ ಹಿಪ್ಪುನೇರಳೆ ತೋಟ ಹಾಗೂ ಹುಳು ಸಾಕಾಣಿಕೆ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆಗೂಡಿನ ಇಳುವರಿ 65 ಕೆ.ಜಿ. ಹಾಗೂ ಒಂದು ಎಕರೆಗೆ ರೇಷ್ಮೆಗೂಡಿನ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್‌ಬುಕ್, ರೇಷ್ಮೆ ಮೊಟ್ಟೆ/ಚಾಕಿ ಖರೀದಿಸಿರುವ ಬಗ್ಗೆ ಹಾಗೂ ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅ.25ರೊಳಗೆ ಸಲ್ಲಿಸಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ರೇಷ್ಮೆ ಇಲಾಖೆ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್, ನಂ,14,2 ನೇ ಮಹಡಿ, ರೇಷ್ಮೆ ಭವನ, ವಾಟಾಳ್ ನಾಗರಾಜ್ ರಸ್ತೆ, ಓಕಳೀಪುರ, ಬೆಂಗಳೂರು -21 ಇಲ್ಲಿ ಸಂಪರ್ಕಿಸಬಹುದು ಎಂದು ನಗರ ಜಿಲ್ಲಾ ರೇಷ್ಮೆ ಉಪನಿರ್ದೇಶಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net