ಶ್ರೇಷ್ಠ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

LETTER
Published on

ಸಿದ್ದಾಪುರ: ಕೃಷಿ ಇಲಾಖೆಯ ಆತ್ಮಾ ಯೋಜನೆಯಲ್ಲಿ 2023-24ನೇ ಸಾಲಿನ ಶ್ರೇಷ್ಠ ಕೃಷಿ ಪ್ರಶಸ್ತಿಗೆ ರೈತರು ಮತ್ತು ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಹಾಗೂ ಕೃಷಿ ಸಂಬಂಧಿತ ಇತರ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ತಾಲೂಕಿನ ರೈತರು ಮತ್ತು ರೈತ ಮಹಿಳೆಯರಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ನಗದು ಬಹುಮಾನ ನೀಡಲಾಗುವುದು. ಆಸಕ್ತ ರೈತರು ಮತ್ತು ರೈತ ಮಹಿಳೆಯರು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಅರ್ಜಿ ನಮೂನೆ ಪಡೆದು ಸೂಕ್ತ ದಾಖಲೆಗಳೊಂದಿಗೆ ಆಗಸ್ಟ್ 15ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗಾಗಿ ತಾಲೂಕು ಕೃಷಿ ಇಲಾಖೆಯ ಆತ್ಮಾ ಯೋಜನೆಯ ಸಿಬ್ಬಂದಿಯನ್ನು ಸಂರ್ಪಸುವಂತೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net