

ವಿಜಯವಾಣಿ ಸುದ್ದಿಜಾಲ ಧಾರವಾಡ
ಪ್ರವಾಸೋದ್ಯಮ ಇಲಾಖೆಯಿಂದ 2024- 25ನೇ ಸಾಲಿನ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆ ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಂಗಾಯಣ ಆವರಣದಲ್ಲಿರುವ ಪ್ರವಾಸೋದ್ಯಮ ಇಲಾಖೆಯಿಂದ ಅರ್ಜಿ ಪಡೆದು ಡಿ. 27ರೊಳಗೆ ಸಲ್ಲಿಸಬೇಕು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.