ಗ್ರಾಮ ಒನ್ ಫ್ರಾಂಚೈಸಿ ಆರಂಭಕ್ಕೆ ಅರ್ಜಿ ಆಹ್ವಾನ

Grama-One
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರದ ಫ್ರಾಂಚೈಸಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಮತ್ತು ನರೇಂದ್ರ, ಅಳ್ನಾವರ ತಾಲೂಕಿನ ಅರವಟಗಿ, ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಫ್ರಾಂಚೈಸಿ ಆರಂಭಿಸಲಾಗುವುದು. ಆಸಕ್ತರು https://www.karnatakaone.gov.in/Public/GramOneFranchiseeTerms ಮೂಲಕ ಡಿ. 15ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಆಯಾ ಗ್ರಾಮ ಪಂಚಾಯಿತಿ ಕಾರ್ಯಾಲಯ ಸಂಪರ್ಕಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net