

ವಿಜಯವಾಣಿ ಸುದ್ದಿಜಾಲ ಧಾರವಾಡ
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅ. 1ರಂದು ವಿಶ್ವ ಹಿರಿಯ ನಾಗರಿಕರ ದಿನ ಆಚರಿಸಲಾಗುತ್ತದೆ. ಈ ಪ್ರಯುಕ್ತ ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಸಲ್ಲಿಸಿದ 6 ಹಿರಿಯ ನಾಗರಿಕರು ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆ. 31ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ವೆಬ್‌ಸೈಟ್ www.dwdsc.karnataka.gov.in ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.