

ಮೈಸೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ರೈತ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಜಿಲ್ಲೆಯಿಂದ ಆಸಕ್ತ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ/ ರೈತ ಮಹಿಳೆ ಪ್ರಶಸ್ತಿ, ಕೆನರಾ ಬ್ಯಾಂಕ್ ಪ್ರಾಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ, ಡಾ.ಎಂ.ಎಚ್. ಮರೀಗೌಡ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ, ಡಾ. ದ್ವಾರಕೀನಾಥ್ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ, ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ. ಜಿಲ್ಲಾ ಮಟ್ಟದ ಅತ್ಯುತ್ತಮ ರೈತ/ ರೈತ ಮಹಿಳೆ ಪ್ರಶಸ್ತಿ, ತಾಲೂಕು ಮಟ್ಟದ ಯುವ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗಳನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ನವೆಂಬರ್‌ನಲ್ಲಿ ಆಯೋಜಿಸಲಿರುವ ಕೃಷಿಮೇಳದಲ್ಲಿ ನೀಡಲಿದೆ.
ನಿಗದಿತ ಅರ್ಜಿ ನಮೂನೆಯನ್ನು ನಾಗನಹಳ್ಳಿಯ ವಿಸ್ತರಣಾ ಶಿಕ್ಷಣ ಘಟಕ, ಆಯಾ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಅಥವಾ ಕೃಷಿ ವಿಶ್ವವಿದ್ಯಾಲಯದ ವೆಬ್‌ಸೈಟ್ www.uasbangalore.edu.in ನಲ್ಲಿ ಪಡೆದುಕೊಳ್ಳಬಹುದು
ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಹಾಗೂ ತಾಲೂಕು ಮಟ್ಟದ ಅರ್ಜಿಗಳನ್ನು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ನಾಗನಹಳ್ಳಿಯ ವಿಸ್ತರಣಾ ಶಿಕ್ಷಣ ಘಟಕಕ್ಕೆ ಜುಲೈ 30 ರೊಳಗೆ ಸಲ್ಲಿಸಬೇಕು ಎಂದು ನಾಗನಹಳ್ಳಿಯ ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.