ಉಪ ನಿರ್ದೇಶಕರ ಹುದ್ದೆಗಾಗಿ ಅರ್ಜಿ ಆಹ್ವಾನ

Application
Published on

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿಯಿರುವ 6 (ಆರು) ಉಪ ನಿರ್ದೇಶಕರ ಹುದ್ದೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಮೇಜರ್/ಲೆಫ್ಟಿನೆಂಟ್ ಕರ್ನಲ್ ಅಥವಾ ನೌಕಾಸೇನಾ ಮತ್ತು ವಾಯು ಸೇನೆಯಲ್ಲಿ ತತ್ಸಮಾನ ರ‍್ಯಾಂಕ್‌ನಿoದ ನಿವೃತ್ತಿ ಹೊಂದಿರುವ, ಎಸ್.ಎಸ್.ಎಲ್.ಸಿ/ತತ್ಸಸಮಾನ ತರಗತಿಯಲ್ಲಿ ಒಂದು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿ ತೇರ್ಗಡೆಯಾದ ಸೈನ್ಯಾಧಿಕಾರಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಸೆ. 16 ಕೊನೆಯ ದಿನಾಂಕವಾಗಿದ್ದು, ಅರ್ಜಿ ನಮೂನೆಯನ್ನು ಸಂಬAಧಿಸಿದ ಎಲ್ಲಾ ದಾಖಲೆಗಳೊಂದಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮೈಸೂರು ಕಛೇರಿಗೆ ಸಲ್ಲಿಸಬಹುದಾಗಿದೆ.


ಅರ್ಜಿ ನಮೂನೆಯನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮೈಸೂರು ಕಛೇರಿಯಲ್ಲಿ ಖುದ್ದಾಗಿ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ದೂ.ಸಂ: 080-25589459 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net