

ವಿಜಯಪುರ : ಪ್ರವಾಸೋದ್ಯಮ ಇಲಾಖೆಯಿಂದ 2024&25ನೇ ಸಾಲಿನ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ& ಆತಿಥ್ಯ ೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯಿಂದ ಅರ್ಜಿ ಪಡೆದು, ಡಿ. 28 ರಂದು ಸಂಜೆ 5 ರೊಳಗೆ ಇಂಡಿ ರಸ್ತೆಯಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಕಾರ್ಯಾಲಯ, ಪ್ರವಾಸಿ ಪ್ಲಾಜಾ, ಬ್ಲಾಕ್&1 ರಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ 08352&250359ಕ್ಕೆ ಸಂಪರ್ಕಿಸುವಂತೆ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.