ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

nigama
Published on

ಮಂಗಳೂರು: 2025-26ನೇ ಸಾಲಿನ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವತಂತ್ರ ಅಮೃತ ಮಹೋತ್ಸವದ ಮುನ್ನಡೆ ಯೋಜನೆ ಒಳಗೊಂಡಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಠಿಠಿ://ಛಿಜ್ಞಿಜ್ಠ.ಚ್ಟ್ಞಠಿ.ಜಟ.ಜ್ಞಿ ಮುಖಾಂತರ ಗ್ರಾಮ ಒನ್, ಮಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ನಿಗಮದ ವೆಬ್‌ಸೈಟ್ ಡಿಡಿಡಿ..ಚ್ಟ್ಞಠಿ.ಜಟ.ಜ್ಞಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 8050770004 ಅಥವಾ 8050770005 ಸಂಪರ್ಕಿಸಬಹುದು ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net