ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

download
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಡಾ. ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 2024- 25ನೇ ಸಾಲಿನ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಯೋಜನೆಯಡಿ ನೇರಸಾಲ, ಉದ್ಯಮಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಭೂ ಒಡೆತನ ಯೋಜನೆ, ಗಂಗಾಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindhu.karantaka.gov.in ಅಥವಾ, ಕರ್ನಾಟಕ ಒನ್, ಗ್ರಾಮ ಒನ್, ಹುಬ್ಬಳ್ಳಿ- ಧಾರವಾಡ ಒನ್ ಕೇಂದ್ರಗಳಲ್ಲಿ ಅ. 10ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net