ಆದರ್ಶ ಶಾಲೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Published on

ಯಳಂದೂರು: ತಾಲೂಕಿನ ಮೆಳ್ಳಹಳ್ಳೆ ಗೇಟ್ ಬಳಿ ಇರುವ ಸರ್ಕಾರಿ ಆದರ್ಶ ಶಾಲೆಯಲ್ಲಿ 2024-25 ನೇ ಸಾಲಿಗೆ 7 ಮತ್ತು 9ನೇ ತರಗತಿಗೆ ಖಾಲಿಯಾಗಿರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾಮಾನ್ಯ ವರ್ಗಕ್ಕೆ ಸೇರಿದ 7ನೇ ತರಗತಿಗೆ 2 ಸೀಟುಗಳು ಮತ್ತು 9ನೇ ತರಗತಿಗೆ ಒಬ್ಬ ವಿದ್ಯಾರ್ಥಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಲು ಜಾತಿ, ಆದಾಯ ಪ್ರಮಾಣಪತ್ರ, ಹಿಂದಿನ ತರಗತಿಯ ಅಂಕಪಟ್ಟಿ, ಇತ್ತೀಚಿನ 2 ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಜೂ. 15 ಅರ್ಜಿ ಸಲ್ಲಿಸಲು ಕೊನೇ ದಿನವಾಗಿದ್ದು, ಜೂ. 25 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಮಾಹಿತಿಗಾಗಿ ಮೊ: 99800 78147 ಸಂಪರ್ಕಿಸಬಹುದೆಂದು ಮುಖ್ಯಶಿಕ್ಷಕ ಗುರುಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net