

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 2024- 25ನೇ ಸಾಲಿಗೆ ಅನುಷ್ಠಾನವಾಗುವ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಯೋಜನೆಯಡಿ ನೇರಸಾಲ, ಉದ್ಯಮಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಭೂಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindhu.karantaka.gov.in ಮೂಲಕ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಹುಬ್ಬಳ್ಳಿ- ಧಾರವಾಡ ಒನ್ ಕೇಂದ್ರಗಳಲ್ಲಿ ಅ. 10ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ನಿಗಮದ ಪ್ರಕಟಣೆ ತಿಳಿಸಿದೆ.