

ವಿಜಯಪುರ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಣಿಕ ಯೋಜನೆಯಡಿ ಸಾಲ&ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಸಿಇಟಿ&ಎನ್ಇಇಟಿ ಪ್ರವೇಶ ಪರೀೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ಗಳಾದ ಪಿಎಚ್ಡಿಯಲ್ಲಿ ವ್ಯಾಸಂಗ ಮಾಡುವ ಆರ್ಯವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ 1 ಲ ರೂಗಳ ಸಾಲವನ್ನು ಶೇ.2ರ ಬಡ್ಡಿ ದರದಲ್ಲಿ ಶೈಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಆಸಕ್ತರು https://www.kacdc.karnataka.gov.in ಮೂಲಕ ಅ. 31 ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.