ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

application
Published on

ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ಗರಿಷ್ಟ ಅವಧಿ ಮುಕ್ತಾಯವಾಗಿರುವ ಹಿನ್ನಲೆಯಲ್ಲಿ ಸದರಿ ಹುದ್ದೆಯನ್ನು ಹೊಸ ಅಭ್ಯರ್ಥಿಗಳಿಂದ ತುಂಬಲು ಅಗತ್ಯ ಷರತ್ತುಗಳನ್ನು ಪೂರೈಸಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

07 ವರ್ಷಗಳ ವಕೀಲ ವೃತ್ತಿಯನ್ನು ಪೂರೈಸಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರು/ವಿಳಾಸ/ಜಾತಿ/ವಿದ್ಯಾರ್ಹತೆ/ವಕೀಲ ವೃತ್ತಿಯಲ್ಲಿನ ಅನುಭವ ವಿವರಗಳನ್ನು ನಮೂದಿಸಿದ ಸ್ವಯಂ ವಿವರಣೆಯ ಮಾಹಿತಿಯೊಂದಿಗೆ (ಬಯೋಡೆಟಾ) ವಿದ್ಯಾರ್ಹತೆ/ವಕೀಲ ವೃತ್ತಿಯಲ್ಲಿ ರಾಜ್ಯ ಬಾರ್ ಕೌನ್ಸಿಲ್ ನೊಂದಣಿ ಮತ್ತು ವಕೀಲ ವೃತ್ತಿಯಲ್ಲಿ ಹೊಂದಿರುವ ಅನುಭವದ ಬಗ್ಗೆ ಸ್ಥಳೀಯ ವಕೀಲರ ಸಂಘದ ದೃಢೀಕರಣ ಪತ್ರ ಹಾಗೂ ಇತ್ಯಾದಿ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 16 ರೊಳಗಾಗಿ ಮೈಸೂರು ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net