ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

application
Published on

ಮೈಸೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿನ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

 ಯೋಜನೆಯಡಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ಹಿಂದುಳಿದ ವರ್ಗಗಳ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಗಸ್ಟ್ 31 ರೊಳಗೆ ಸಲ್ಲಿಸಬಹುದಾಗಿದೆ. 2023- 24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

 ಹೆಚ್ಚಿನ ಮಾಹಿತಿಗಾಗಿ www.dbcdc.karnataka.gov.in, ನಿಗಮದ ಸಹಾಯವಾಣಿ: 080-22374832, 8050770004, 8050770005 ಹಾಗೂ ಜಿಲ್ಲಾ ಕಛೇರಿಯ ದೂ.ಸಂ: 0821-2341194 ಅನ್ನು ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ)ದ ಜಿಲ್ಲಾ ವ್ಯವಸ್ಥಾಪಕರಾದ ಎಚ್.ಎ ಶೋಭಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net