ಕಾನೂನು ಪದವೀಧರರಿಗೆ ತರಬೇತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Application
Published on

ಮಂಡ್ಯ: ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಹಿಂದುಳಿದ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ತರಬೇತಿ ನೀಡಲು ಅರ್ಜಿ ಸಲ್ಲಿಸಲು ತಿಳಿಸಿದ್ದ ಅಂತಿಮ ದಿನಾಂಕವನ್ನು ಜು.28ರವರೆಗೆ ವಿಸ್ತರಿಸಲಾಗಿದೆ.

ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಹಳೇ ತಹಸೀಲ್ದಾರ್ ಕಚೇರಿ ಹತ್ತಿರದ ಸರ್ಕಾರಿ ಕಚೇರಿಗಳ ಸಮುಚ್ಚಯದಲ್ಲಿನ 1ನೇ ಮಹಡಿಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಅಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು. ಮಾಹಿತಿಗೆ ದೂ.ಸಂ 08232-220835 ಯನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net