ವಿದ್ಯಾರ್ಥಿಗಳಿಗೆ ಬಿಎಂಟಿಸಿ ರಿಯಾಯಿತಿ ಪಾಸು ವಿತರಣೆಗೆ ಅರ್ಜಿ ಸಲ್ಲಿಕೆ ಆರಂಭ

bmtc
Published on

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ಸರ್ಕಾರದ ನಿರ್ದೇಶನದಂತೆ ಉಚಿತ ಹಾಗೂ ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಿತರಣೆ ಮಾಡಲಿದ್ದು, 2025-26 ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ಮೇ26 ರಿಂದ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಿ ಜೂ.1 ರಿಂದ ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು ಎಂದು ಬಿಎಂಟಿಸಿ ತಿಳಿಸಿದೆ.

ಆನ್‌ಲೈನ್ ಅರ್ಜಿಯು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕವು ವಿದ್ಯಾರ್ಥಿ ಪಾಸಿಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳಲ್ಲಿ ಹಾಗೂ ಬೆಂ.ಮ.ಸಾ.ಸಂಸ್ಥೆಯ ಕೆಂಪೇಗೌಡ ಬಸ್ ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಘಟಕ -19, ಶಾಂತಿನಗರ ಟಿಟಿಎಂಸಿ, ಕರಾರಸಾ ನಿಗಮದ ಆನೇಕಲ್ ಬಸ್ ನಿಲ್ದಾಣದಲ್ಲಿ ವಿತರಿಸಲಾಗುವುದು.

ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ್ದು, ಅದರಂತೆ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರು ಉಚಿತ ಪ್ರಯಾಣ ಸೌಲಭ್ಯ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ: 08022483777 ಗೆ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net