

ಮೈಸೂರು: 2024-25 ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ಡಾ.ಬಿ.ಆರ್.ಅಂಬೇಡ್ಕರ್/ಇAದಿರಾ ಗಾಂಧಿ ವಸತಿ ಶಾಲೆಗಳಲ್ಲಿ 7, 8 ಮತ್ತು 9 ನೇ ತರಗತಿಯಲ್ಲಿ ಉಳಿಕೆ ಇರುವ ಸ್ಥಾನಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.
ಅರ್ಜಿಯನ್ನು ಜಿಲ್ಲೆಯ ಎಲ್ಲ ವಸತಿ ಶಾಲೆಗಳಲ್ಲಿ ಪಡೆಯಬಹುದಾಗಿದ್ದು, ಜೂನ್ 22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ರೋಸ್ಟರ್ ಮತ್ತು ಮೆರಿಟ್ ಅನುಸಾರ ಸೀಟು ಹಂಚಿಕೆ ಮಾಡಲಾಗುತ್ತಿದು, ಆಯಾಯ ತಾಲ್ಲೂಕಿನ ವಸತಿ ಶಾಲೆಗಳಲ್ಲಿ ಜೂನ್ 24 ರಂದು ಬೆಳಗ್ಗೆ 11 ಗಂಟೆ ಯಿಂದ ಪ್ರವೇಶ ಪರೀಕ್ಷೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.