

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯ ಸರ್ಕಾರ ಕೃಷಿ ಭಾಗ್ಯ ಯೋಜನೆಯನ್ನು ಮರು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ. ಈ ಯೋಜನೆಯಡಿ ಕೃಷಿಹೊಂಡ ಮತ್ತು ಇತರ ಘಟಕಗಳನ್ನೊಳಗೊಂಡ ಪ್ಯಾಕೇಜ್ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಕೃಷಿ ಇಲಾಖೆ ಅರ್ಜಿ ಆಹ್ವಾನಿಸಿದೆ. ಹಿಂದೆ ಈ ಯೋಜನೆಯ ಸೌಲಭ್ಯ ಪಡೆಯದ ರೈತರು ಅರ್ಹರು. ಮಾಹಿತಿಗೆ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬೇಕು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ