ಕ್ರೀಡಾ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

111111111
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025- 26ನೇ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಜಿಲ್ಲೆಯ ಆಯ್ದ ಕ್ರಿಯಾಶೀಲ ಯುವಕ ಸಂಘಗಳಿಗೆ ಕ್ರೀಡಾ ಕಿಟ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾ ಇಲಾಖೆಯಿಂದ ಮಾನ್ಯತೆ ಪಡೆದ ಸಂಘಗಳು 2024- 25ನೇ ಸಾಲಿನಲ್ಲಿ ಆಯೋಜಿಸಿದ್ದ ಕ್ರೀಡಾಕೂಟ, ಕಾರ್ಯಚಟುವಟಿಕೆ, ಸಮಾಜಸೇವೆ ಹಾಗೂ ಇನ್ನಿತರ ಚಟುವಟಿಕೆಗಳ ಮಾಹಿತಿಯನ್ನು ಜು. 18ರೊಳಗೆ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net