

ವಿಜಯವಾಣಿ ಸುದ್ದಿಜಾಲ ಧಾರವಾಡ
ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ಏರ್ಪಡಿಸುವ ಸನ್ಮಾನ ಸಮಾರಂಭಕ್ಕಾಗಿ 2024ನೇ ವರ್ಷದ ರಾಷ್ಟ್ರಮಟ್ಟದ ಕ್ರೀಡಾ ಕೂಟದಲ್ಲಿ ಪದಕ ವಿಜೇತ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜ. 16ರೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪಕಿರ್ಸಬಹುದು ಎಂದು ಪ್ರಕಟಣೆ ತಿಳಿಸಿದೆ.