ಅರ್ಜಿ ಆಹ್ವಾನ

download
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಹಸಿರು ಕ್ರಾತಿಯ ಹರಿಕಾರ ಹಾಗೂ ಮಾಜಿ ಉಪ ಪ್ರಧಾನಿ ಡಾ. ಜಗಜೀವನ್‌ರಾಂ ಅವರ 118ನೇ ಜಯಂತಿಯನ್ನು ಏ. 5ರಂದು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುವುದು. ಪರಿಶಿಷ್ಟ ಜಾತಿಯವರ ಶ್ರೇಯಸ್ಸಿಗಾಗಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಗೆ ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸಮಾಜ ಕಲ್ಯಾಣ ಇಲಾಖೆಯ ಆಯಾ ತಾಲೂಕು ಸಹಾಯಕ ನಿರ್ದೇಶಕರ ಕಚೇರಿಗಳಿಂದ ಅರ್ಜಿ ಪಡೆದು ಮಾ. 29ರೊಳಗೆ ಸಲ್ಲಿಸಬೇಕು. ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಕಚೇರಿಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net