

ವಿಜಯವಾಣಿ ಸುದ್ದಿಜಾಲ ಧಾರವಾಡ
ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮ ಜಯಂತಿಯನ್ನು ಏ. 14ರಂದು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುವುದು. ಪರಿಶಿಷ್ಟ ಜಾತಿಯವರ ಶ್ರೇಯಸ್ಸಿಗಾಗಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು ಏ. 8ರೊಳಗೆ ಸಲ್ಲಿಸಬೇಕು. ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆ ಕಚೇರಿ ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.