

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯ 6 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಗೆ (ಆಂಗ್ಲ ಮಾಧ್ಯಮ) 2025- 26ನೇ ಸಾಲಿನ ಪ್ರವೇಶಕ್ಕಾಗಿ ಅಲ್ಪಸಂಖ್ಯಾತ, ಇತರ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 5ನೇ ತರಗತಿ ಪಾಸಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ. 75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಸೀಟು ಲಭ್ಯ ಇವೆ. ಆಸಕ್ತ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ವೆಬ್‌ಸೈಟ್ sevasindhuservices.karnataka.gov.in ಮೂಲಕ ಮಾ. 25ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.