

ವಿಜಯವಾಣಿ ಸುದ್ದಿಜಾಲ ಧಾರವಾಡ
ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹುಬ್ಬಳ್ಳಿ ಅಂಚಟಗೇರಿಯ ಡಾ. ಎಪಿಜೆ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು. ಧಾರವಾಡ ತಾಲೂಕಿನ ಶಿಂಗನಹಳ್ಳಿಯ ಮುರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು, ಹುಬ್ಬಳ್ಳಿ ಸದಾಶಿವನಗರದ ಮೌಲಾನಾ ಆಜಾದ್ ಆಂಗ್ಲ ಮಾದರಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ (ಪಿಸಿಎಂಬಿ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮೇ 17ರೊಳಗೆ sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಇಲಾಖೆಯ ಜಿಲ್ಲಾ, ತಾಲೂಕು ಕಚೇರಿ ಸಂಪರ್ಕಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.