

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ (ಯುಎಎಸ್ಬಿ) ಹಳೆಯ ವಿದ್ಯಾರ್ಥಿಗಳ ಸಂಘವು ಕೃಷಿ ತಂತ್ರಜ್ಞಾನ ಪ್ರಸರಣೆಯ ವೇಗ ಹೆಚ್ಚಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ‘ಹೊಂಬಾಳೆ ಸಂಹಿತ ಹರಿಣಿಕುಮಾರ್ ಕೃಷಿ ಮಾಧ್ಯಮ ಪ್ರಶಸ್ತಿ’ ನೀಡಲು ನಿರ್ಧರಿಸಿದೆ.
ಈ ಪ್ರಶಸ್ತಿಗೆ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರು, ವರದಿಗಾರರು, ನಿರೂಪಕರು, ಅಧಿಕಾರಿಗಲು ಹಾಗೂ ಕೃಷಿ ವಿಸ್ತರಣಾ ಕಾರ್ಯಕರ್ತರು ಅರ್ಜಿ ಸಲ್ಲಿಸಬಹುದು. ಪ್ರಶಸ್ತಿಯು ಪ್ರಮಾಣಪತ್ರ ಹಾಗೂ 10 ಸಾವಿರ ರೂ. ನಗದು ಬಹುಮಾನ ಒಳಗೊಂಡಿರುತ್ತದೆ. ಭರ್ತಿ ಮಾಡಿದ ಅರ್ಜಿಯನ್ನು ಹಳೆಯ ವಿದ್ಯಾರ್ಥಿಗಳ ಸಂಘ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಪಶುವೈದ್ಯಕೀಯ ಕಾಲೇಜು ಆವರಣ, ಹೆಬ್ಬಾಳ, ಬೆಂಗಳೂರು 560024 ಈ ವಿಳಾಸಕ್ಕೆ ಆ.14ರೊಳಗೆ ಸಲ್ಲಿಸಬಹುದಾಗಿದೆ ಎಂದು ಅಲುಮ್ನಿ ಸಂಘದ ಪದಾಧಿಕಾರಿ ಕೆ.ಶಿವರಾಮು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.