ಡಿ.ಇಡಿ ತರಬೇತಿಗೆ ಅರ್ಜಿ ಆಹ್ವಾನ: ಆಸಕ್ತರು ಜು.12ರೊಳಗೆ ಅರ್ಜಿ ಸಲ್ಲಿಸಿ

Training icon isolated on white background. Vector illustration. Eps 10.
Training icon isolated on white background. Vector illustration. Eps 10.
Published on

ಮಂಡ್ಯ: ಮೈಸೂರಿನ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ನಡೆಯುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಅಂಧ ಮಕ್ಕಳಿಗೆ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ವರ್ಷಗಳ ವಿಶೇಷ ಡಿ.ಇಡಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.50ರಷ್ಟು(ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ವಿದ್ಯಾರ್ಥಿಗಳಿಗೆ ಶೇ.45) ಅಂಕಗಳೊಂದಿಗೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳು ಜು.12ರೊಳಗೆ ವೆಬ್‌ಸೈಟ್ https://nber&rehabcouncil.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ವಿಶೇಷ ಡಿ.ಇಡಿ ತರಬೇತಿ ಸಾಮಾನ್ಯ ಡಿ.ಇಡಿ ತರಬೇತಿಗೆ ಸಮಾನಾಂತರವಾಗಿವೆ. ಅಂಗವಿಕಲರು ಸೇರಿದಂತೆ ಸಾಮಾನ್ಯ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದಾಗಿದ್ದು, ತರಬೇತಿ ಸಂಪೂರ್ಣ ಉಚಿತವಾಗಿರುತ್ತದೆ.

ಮಾಹಿತಿಗೆ ದೂ.ಸಂ 0821-2491600 ಅಥವಾ ಮೊ.ಸಂ 9113561620/9686762378 ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net