ವಿವಿಧೆಡೆ ನ್ಯಾಯಬೆಲೆ ಅಂಗಡಿಗೆ ಅರ್ಜಿ ಆಹ್ವಾನ

ration shop
Published on

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಹೊಸ ನ್ಯಾಯಬೆಲೆ ಅಂಗಡಿ ನಿರ್ವಹಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಹುಕ್ಕೇರಿ ತಾಲೂಕಿನ ಕೋಚರಿ ಗ್ರಾಮದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ನಿರ್ವಹಿಸಲು ಅ.17ರೊಳಗೆ ಹುಕ್ಕೇರಿ ತಹಸೀಲ್ದಾರ್​ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಾಗಿ ಅ.19ರೊಳಗೆ ಅಥಣಿ ತಹಸೀಲ್ದಾರ್​ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಬೆಳಗಾವಿಯ ವೀರಭದ್ರೇಶ್ವರ ನಗರದಲ್ಲಿ ಎರಡು ನ್ಯಾಯಬೆಲೆ ಅಂಗಡಿ ಇದ್ದು, ಇನ್ನೊಂದು ನ್ಯಾಯಬೆಲೆ ಅಂಗಡಿ ನಿರ್ವಹಿಸಲು ಅ.9ರೊಳಗೆ ತಹಸೀಲ್ದಾರ್​ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಆಯಾ ತಹಸೀಲ್ದಾರ್​ ಹುಕ್ಕೇರಿ ಸಂಪರ್ಕಿಸಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net