2025ರ ಸೆ.12ರ ನಂತರ ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ, ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆನ್‌ಲೈನ್‌ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ಎಲ್ಲ ತಾಲೂಕುಗಳ ಅರ್ಹ ಪತ್ರಕರ್ತರು ಸೇವಾ ಸಿಂಧು ಪೋರ್ಟಲ್ ಮೂಲಕ ಜೂ.20 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.