ಮೈಸೂರು : ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Journalism
Published on


ಮೈಸೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಪರಿಶಿಷ್ಟ ಜಾತಿಗೆ ಸೇರಿದ 02 ಅಭ್ಯರ್ಥಿಗಳು ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 01 ಅಭ್ಯರ್ಥಿ ಆಯ್ಕೆಗೆ ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವೀಧರರಿಗೆ ಮೈಸೂರು ಜಿಲ್ಲಾ ಕಚೇರಿಯಲ್ಲಿ 12 ತಿಂಗಳ ಅವಧಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


 ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದAದು ಅಭ್ಯರ್ಥಿಗಳು 35 ವರ್ಷದ ಒಳಗಿರಬೇಕು. ತರಬೇತಿಯ ಅವಧಿ ವೇಳೆ ಮಾಹೆಯಾನ 15 ಸಾವಿರ ರೂ. ಸ್ಟೆöÊಪಂಡ್ ನೀಡಲಾಗುವುದು. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ. ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೇ ಇದ್ದಲ್ಲಿ ನೆರೆಯ ಜಿಲ್ಲೆಗಳಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿಗಳನ್ನು 2022ರ ನವೆಂಬರ್ 15 ರೊಳಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಉಪನಿರ್ದೇಶಕರ ಕಚೇರಿ, ವಾರ್ತಾಭವನ, ಧನ್ವಂತರಿರಸ್ತೆ, ಮೈಸೂರು-570001, ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರು, ಮೊ.ಸಂ: 9480841229 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net