ವಿವಿಧ ಯೋಜನೆಯಡಿ ಸಾಲ&ಸೌಲಭ್ಯಕ್ಕೆ ಅರ್ಜಿ ಆಹ್ವಾನ

Site inspection with officials, steps taken to beautify Taj Bawadi memorial
The Eightfold Path of Donation and Puja Festival
Published on

ವಿಜಯಪುರ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಪಂಗಡದ ಸಮುದಾಯದ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಯಡಿ ಸಾಲ&ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ ಉದ್ಯೋಗ ನೇರಸಾಲ ಯೋಜನೆ ಟಕ ಯೋಜನೆಯಡಿ 1 ಲಕ್ಷ ರೂ. ಸಹಾಯಧನ ಹಾಗೂ 50 ಸಾವಿರ ರೂ. ಬೀಜಧನ (ಶೇ. 4 ರಷ್ಟು ಬಡ್ಡಿ ದರ), ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ಹಸುಗಳಿಗೆ ಟಕ ವೆಚ್ಚದ ಶೇ.50 ರಷ್ಟು ಅಥವಾ ಗರಿಷ್ಟ 1.25ಲಕ್ಷ ರೂ.ಗಳ ಸಹಾಯಧನ, ಸ್ವಾವಲಂಬಿ ಸಾರಥಿ ಯೋಜನೆಯ, ಸರಕು ವಾಹನ/ಟ್ಯಾಕ್ಸಿ (ಹಳದಿ ಬೋರ್ಡ್​) ಖರೀದಿಸುವ ಉದ್ದೇಶಕ್ಕೆ ಸಾಲದ ಮೊತ್ತದ ಶೇ.75 ರಷ್ಟು ಸಹಾಯಧನ ಅಥವಾ 4 ಲಕ್ಷ ರೂ. ಗರಿಷ್ಠ ಮೊತ್ತ ನೀಡಲಾಗುವುದು.

ಅಲ್ಲದೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಇತರೆ ಉದ್ದೇಶಕ್ಕಾಗಿ ವ್ಯಾಪಾರ ಮತ್ತು ಇತರೆ ಉದ್ದೇಶಗಳಿಗೆ ಟಕ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಠ 2ಲಕ್ಷ ರೂ. ಸಹಾಯಧನ ನೀಡಲಾಗುವುದು.ಮೈಕ್ರೋ ಕ್ರೆಡಿಟ್​(ಪ್ರೇರಣಾ) ಯೋಜನೆ, (ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಟಕ ವೆಚ್ಚ 5 ಲಕ್ಷ ರೂ. ಸಹಾಯಧನ 2.50 ಲಕ್ಷ ರೂ., ಬೀಜಧನ 2.50 ಲಕ್ಷ ರೂ. (ಶೇ 4 ರಷ್ಟು ಬಡ್ಡಿ ದರ), ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.

2023&24 ಹಾಗೂ 2024&25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವರು ಮತ್ತೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ. ಅರ್ಜಿದಾರರು ಕರ್ನಾಟಕ ಒನ್​, ಗ್ರಾಮ ಒನ್​ ಹಾಗೂ ಬೆಂಗಳೂರು ಒನ್​ ಕೇಂದ್ರಗಳಲ್ಲಿ ಸೆ. 17 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕ ಕಚೇರಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net