

ವಿಜಯಪುರ: ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2025&26ನೇ ಸಾಲಿಗೆ ಅಲೆಮಾರಿ ಸಮುದಾಯದವರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಯಡಿ ಸಾಲ&ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗಾಗಿ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಬ್ಯಾಂಕ್ ಸಹಯೋಗದೊಂದಿಗೆ ಉದ್ಯಮಶೀಲತಾ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಪ್ರೇರಣಾ ಮೈಕ್ರೋ ಕ್ರೆಡಿಟ್ ಯೋಜನೆಗಳಡಿ ಆನ್ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.
ಸೆ. 17 ರಂದು ಅರ್ಜಿ ಸಲ್ಲಿಕೆಗೆ ಕೊನೇ ದಿನ. 2023&24 ಮತ್ತು 2024&25ನೇ ಸಾಲಿನಲ್ಲಿ ಆನ್ಲೈನ್ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಸಲ್ಲಿಸಬಾರದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಸಂಪರ್ಕಿಸುವಂತೆ ಇಲಾಖಾ ಉಪ ನಿರ್ದೇಶಕ ಮಹೇಶ ಪೋತದಾರ ತಿಳಿಸಿದ್ದಾರೆ.