ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

111111111
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಥವಾ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳಿಗೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತರು ಜಿಲ್ಲಾ ಅಂಗವಿಕಲರ ಕಲ್ಯಾಣಾಽಕಾರಿ ಕಚೇರಿಯಿಂದ ಅರ್ಜಿ ಪಡೆದು ಆ. 25ರೊಳಗೆ ಸಲ್ಲಿಸಬೇಕು. ಮಾಹಿತಿಗೆ ತಾಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net