ಕುಂದಾಪುರ: ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2025-26ನೇ ಸಾಲಿನಲ್ಲಿ ಹೊಸದಾಗಿ ಪ್ರವೇಶ ಕೋರುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಡಿಡಿಡಿ.ಡಿ.ಚ್ಟ.್ಞಜ್ಚಿ.ಜ್ಞಿ ವೆಬ್‌ಸೈಟ್‌ನಲ್ಲಿ ಖ.ಏ. (ಖಠಿಠಿಛಿ ಏಟಠಿಛ್ಝಿ ಟ್ಟಠಿಚ್ಝ) ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳನ್ನು ವಿದ್ಯಾರ್ಥಿಯ, ಪಾಲಕರ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿ, ಪಾಲಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿ ಮಾರ್ಕ್ಸ್ ಕಾರ್ಡ್ ಜೆರಾಕ್ಸ್ ಪ್ರತಿ, ವಿದ್ಯಾರ್ಥಿಯ ಎಸ್.ಎಸ್.ಪಿ. ಐಡಿ ಸಂಖ್ಯೆಗಳ ದಾಖಲೆ ಲಗತ್ತಿಸಿ ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕುಂದಾಪುರ, ದೂರವಾಣಿ ಸಂಖ್ಯೆ: 94808 43208 ಸಂಪರ್ಕಿಸುವುದು ಅಥವಾ ಕಚೇರಿ ಸಮಯದಲ್ಲಿ ಭೇಟಿ ನೀಡಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.