ಶ್ರೇಷ್ಠ ಕೃಷಿಕ, ಕೃಷಿ ಮಹಿಳೆೆ ಪ್ರಶಸ್ತಿಗೆ ಅರ್ಜಿ ಆಹ್ವಾನ

111111111
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ರೈತರನ್ನು ಗುರುತಿಸಿ ಕೃಷಿ ಮೇಳದಲ್ಲಿ ಪ್ರಶಸ್ತಿ ನೀಡಲು ನಗರದ ಕೃಷಿ ವಿಶ್ವವಿದ್ಯಾಲಯ ಅರ್ಜಿ ಆಹ್ವಾನಿಸಿದೆ. ಜಿಲ್ಲೆಗೆ ಒಬ್ಬರಂತೆ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆಗೆ ಶ್ರೇಷ್ಠ ಕೃಷಿಕ, ಕೃಷಿ ಮಹಿಳೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಆಸಕ್ತರು ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು, ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು ಜು. 10ರೊಳಗೆ ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರಕ್ಕೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net