

ವಿಜಯವಾಣಿ ಸುದ್ದಿಜಾಲ ಧಾರವಾಡ
ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಹಾಗೂ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆ ಮತ್ತು ಕಾಲೇಜುಗಳಲ್ಲಿ ವಿವಿಧ ವಿಷಯಗಳ ಬೋಧನೆಗೆ ತಾತ್ಕಾಲಿಕ ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮೇ 19ರೊಳಗೆ dom.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಇಲಾಖೆಯ ತಾಲೂಕು ಅಥವಾ ಜಿಲ್ಲಾ ಕಚೇರಿ ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.